ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 18 ರಿಂದ 44 ವರ್ಷದೊಳಗಿನ ವಯೋಮಾನದವರಿಗೆ ಕೊರೊನಾ ಲಸಿಕೆ ವಿತರಣೆ ಪುನರಾರಂಭ ಮಾಡಲಾಗುತ್ತದೆ. ಮೊದಲಿಗೆ ರಾಜ್ಯ ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಆದ್ಯತೆ ಗುಂಪುಗಳಿಗೆ ಲಸಿಕೆ ನೀಡಲಾಗುತ್ತದೆ.

ಅಂಗವೈಕಲ್ಯ ಹೊಂದಿರುವ ಫಲಾನುಭವಿಗಳು, ಕೈದಿಗಳು, ಚಿತಾಗಾರದಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ಮಾಧ್ಯಮದವರು ಸೇರಿದಂತೆ ಹಲವರನ್ನು ಸರ್ಕಾರ ಕೋವಿಡ್​ ವಾರಿಯರ್ಸ್ ಎಂದು ಘೋಷಿಸಿದ್ದು, ಮೊದಲು ಇವರಿಗೆ ಲಸಿಕೆ ನೀಡಲಾಗುತ್ತದೆ.

The post ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ.. ಫ್ರಂಟ್​ಲೈನ್​​ ವರ್ಕರ್ಸ್​ಗೆ ಆದ್ಯತೆ appeared first on News First Kannada.

Source: newsfirstlive.com

Source link