ಬೆಂಗಳೂರು: ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಇಂದು ಸಚಿವರು ಹಾಗೂ ಸರ್ಕಾರದ ಮುಖ್ಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಈ ಸಭೆಯಲ್ಲಿ ರಾಜ್ಯದಲ್ಲಿರುವ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಆಕ್ಸಿಜನ್ ಎಲ್ಲಿ ಹೆಚ್ಚಾಗಿದೆ? ಎಲ್ಲಿ‌ ಕಡಿಮೆ ಬೇಡಿಕೆ ಇದೆ ಅನ್ನೋದರ ಬಗ್ಗೆ ನಿಗಾ ಇಟ್ಟು ಆಕ್ಸಿಜನ್ ಜಿಲ್ಲಾವಾರು ಹಂಚಿಕೆ ಬಗ್ಗೆ ನಿಗಾ ವಹಿಸಲು ಸೂಚಿಸಲಾಯಿತು.

ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಣ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಲಾಯಿತು. ಬ್ಲಾಕ್ ಫಂಗಸ್​ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಅದನ್ನು‌ ನಿಯಂತ್ರಿಸಲು‌ ಕ್ರಮ ವಹಿಸುವಂತೆ ಸೂಚಿಸಲಾಯಿತು. ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ಕೊರೊನಾ ಸೋಂಕನ್ನು ನಿಯಂತ್ರಿಸಲು ಸೂಕ್ತ ಕ್ರಮವಹಿಸಲು ಸೂಚಿಸಲಾಯಿತು.

ಇನ್ನು ಇವತ್ತಿನ ಸಭೆಯಲ್ಲಿ ಲಾಕ್‌ಡೌನ್ ಬಗ್ಗೆ ವಿಸ್ತೃತ ಚರ್ಚೆ ಆಗಲಿಲ್ಲ. ಯಾವುದೇ ನಿರ್ಧಾರ ಕೈಗೊಂಡಿಲ್ಲ. ಶನಿವಾರ ಮತ್ತೊಂದು ಸುತ್ತಿನಲ್ಲಿ ಸಚಿವರ ಜತೆ ಸಿಎಂ ಸಭೆ ನಡೆಸಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

The post ಇಂದಿನ ಸಿಎಂ ಸಭೆಯಲ್ಲಿ ಲಾಕ್​ಡೌನ್ ಬಗ್ಗೆ ಏನ್ ನಿರ್ಧಾರ ಮಾಡಿದ್ರು..? appeared first on News First Kannada.

Source: newsfirstlive.com

Source link