ಇಂದು ಅಪ್ಪು ಅಭಿಮಾನಿಗಳಿಗಾಗಿ ಅನ್ನಸಂತರ್ಪಣೆ.. ಅರಮನೆ ಮೈದಾನದ ಸುತ್ತ ಪೊಲೀಸರ ಬಿಗಿ ಬಂದೋಬಸ್ತ್


ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನಡೆಯಲಿದ್ದು ಕುಟುಂಬಸ್ಥರು ತಯಾರಿ ನಡೆಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಪುಣ್ಯಸ್ಮರಣೆ ಕಾರ್ಯ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ.

ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರಕ್ಕೆ ನಮಿಸಿ, 12 ಘಂಟೆಯಿಂದ ಅರಮನೆ ಮೈದಾನದ ವೈಟ್ ಪೆಟಲ್ಸ್ ಹಾಗು ತ್ರಿಪುರವಾಸಿನಿಯಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೀ ರೈಸ್, ಅನ್ನ ಸಾರು,‌ ಅಕ್ಕಿ ಪಾಯಸ, ಮಸಾಲೆ ವಡೆ ಸೇರಿದಂತೆ ಹಲವು ಬಗೆಯ ಅನ್ನಸಂತರ್ಪಣೆ ಮಾಡಲಾಗುತ್ತದೆ.

ಪೊಲೀಸರ ಬಿಗಿ ಬಂದೋಬಸ್ತ್..

ಇನ್ನು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗಿ ಆಗುವ ನಿರೀಕ್ಷೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಗೆ ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. 3 ಎಸಿಪಿ, 32 ಪೊಲೀಸ್ ಇನ್ಸ್​ಪೆಕ್ಟರ್, 70 ಪಿಎಸ್ಐ, 6 ಕೆಎಸ್ಆರ್​​​ಪಿ ತುಕಡಿ ಭದ್ರತೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನು ಗಾಯತ್ರಿ ವಿಹಾರದ ಗೇಟ್ ನಂಬರ್ 4 ರಲ್ಲಿ VIP ವಾಹನಗಳಿಗೆ, ಕೃಷ್ಣ ವಿಹಾರ್ ಗೇಟ್ ನಂಬರ್ 1 ರಲ್ಲಿ ಸಾರ್ವಜನಿಕರ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಗೇಟ್ ನಂಬರ್-2 ಗಾಯತ್ರಿ ವಿಹಾರ್ ಮೂಲಕ ಪ್ರವೇಶ ಪಡೆಯಬಹುದಾಗಿದ್ದು, VIPಗಳಿಗೆ ಪ್ರತ್ಯೇಕವಾಗಿ ಗೇಟ್ ನಂಬರ್-2 ರಲ್ಲಿ ಪ್ರವೇಶ ಕಲ್ಪಿಸಲಾಗುತ್ತದೆ. ಕಾರ್ಯಕ್ರಮದಲ್ಲಿ 25-30 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ನಿರೀಕ್ಷೆಗೂ ಮೀರಿ ಅಭಿಮಾನಿಗಳು ಬಂದರೇ ಮತ್ತೆ 8 ಪ್ರತ್ಯೇಕ ಕೌಂಟರ್ ಗಳು ತೆರೆಯೋ ಸಾಧ್ಯತೆ ಇದೆ.

News First Live Kannada


Leave a Reply

Your email address will not be published.