ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕಾಂಗ್ರೆಸ್​ ಹೈಕಮಾಂಡ್ ರಾಹುಲ್​ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ.

ಹೈಕಮಾಂಡ್​ ಆಹ್ವಾನದ ಮೇರೆಗೆ ನಿನ್ನೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಟ್ಟಿಗೆ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಲಿದ್ದು, ಈ ಭೇಟಿ ಕಾಂಗ್ರೆಸ್​​ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ತಮ್ಮನ್ನು ಭೇಟಿಯಾಗಲಿ ರಾಜ್ಯದ ಇಬ್ಬರು ನಾಯಕರಿಗೂ ರಾಹುಲ್ ಗಾಂಧಿ ಅವಕಾಶ ಕೊಟ್ಟಿದ್ದು, ತುಘಲಕ್ ಲೈನ್ ರಸ್ತೆಯಲ್ಲಿರೋ ರಾಹುಲ್ ಗಾಂಧಿ ನಿವಾಸದಲ್ಲಿ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಬ್ಬರು ನಾಯಕರಿಗೆ ಹೈಕಮಾಂಡ್ ಆಹ್ವಾನ ನೀಡಿದ್ದು, ಸಭೆಯಲ್ಲಿ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವೇಣುಗೋಪಾಲ್ ಭಾಗಿಯಾಗಲಿದ್ದು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿನ ಕಾಂಗ್ರೆಸ್ ಪರಿಸ್ಥಿತಿ, ಪದಾಧಿಕಾರಿಗಳ ಪಟ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

The post ಇಂದು ಡಿಕೆಎಸ್​​, ಸಿದ್ದರಾಮಯ್ಯರಿಂದ ರಾಹುಲ್​​ ಗಾಂಧಿ ಭೇಟಿ -‘ಕೈ’ ಪಾಳಯದಲ್ಲಿ ಕುತೂಹಲ appeared first on News First Kannada.

Source: newsfirstlive.com

Source link