ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ92,596 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,90,89,069ಕ್ಕೆ ತಲುಪಿದೆ. ಪ್ರತಿದಿನದ ಕೊರೊನಾ ಪಾಸಿಟಿವಿಟಿ ರೇಟ್ ಇಂದು​​ 4.62ಕ್ಕೆ ಇಳಿದಿದೆ.

ಇಂದು 1,62,664 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,75,04,126ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2219 ಮಂದಿ ಸಾವನ್ನಪ್ಪಿದ್ದು ಈವರೆಗೆ 3,53,528 ಮಂದಿ ಕೋವಿಡ್​ಗೆ ಬಲಿಯಾದಂತಾಗಿದೆ.

ಕೊರೊನಾ ಅಂಕಿ-ಅಂಶಗಳು

ಒಟ್ಟು ಸೋಂಕಿತರು: 2,90,89,069
ಒಟ್ಟು ಡಿಸ್ಚಾರ್ಜ್ ಆದವರು: 2,75,04,126
ಒಟ್ಟು ಸಾವುಗಳು: 3,53,528
ಒಟ್ಟು ಆ್ಯಕ್ಟಿವ್ ಕೇಸ್​​ಗಳು: 12,31,415
ಈವರಗೆ ವ್ಯಾಕ್ಸಿನ್ ಪಡೆದವರು: 23,90,58,360

 

The post ಇಂದು ದೇಶದಲ್ಲಿ 92,596 ಹೊಸ ಕೊರೊನಾ ಕೇಸ್​, 1,62,664 ಮಂದಿ ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link