ಬೆಂಗಳೂರು: ಇಂದು ಮತ್ತು ನಾಳೆ ರಾಜ್ಯದಲ್ಲಿ‌ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​ ಘೋಷಣೆ ಮಾಡಿರುವುದಾಗಿ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ ಜೂನ್ 4ರಿಂದ 6ರವರೆಗೆ ವ್ಯಾಪಕ‌ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್​ 4 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 5 ರಂದು‌ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯನ್ನ ನಿರೀಕ್ಷಿಸಲಾಗಿದ್ದು, ಇವತ್ತು ಮತ್ತು ನಾಳೆ ಈ‌ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇನ್ನೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇವತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಕೋಲಾರ, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ,‌ ಮಂಡ್ಯ, ಮೈಸೂರು, ಚಾಮರಾಜನಗರ ಭಾಗದ ಕೆಲವು ಕಡೆ ಭಾರೀ ಮಳೆಯಾಗುವ ಹಿನ್ನೆಲೆ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

The post ಇಂದು & ನಾಳೆ ರಾಜ್ಯದಲ್ಲಿ‌ ವ್ಯಾಪಕ ಮಳೆ; ಹವಾಮಾನ ಇಲಾಖೆ ಬೆಂಗಳೂರಿಗೆ ಕೊಟ್ಟ ಎಚ್ಚರಿಕೆ ಏನು? appeared first on News First Kannada.

Source: newsfirstlive.com

Source link