ಇಂದು ಪರಿಷತ್​ನ 4 ಕ್ಷೇತ್ರಗಳ ಚುನಾವಣಾ ಫಲಿತಾಂಶ: 3 ಪಕ್ಷಗಳ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ | The four constituencies of the council election results Today: The fate of 49 candidates of 3 parties


ಇಂದು ಪರಿಷತ್​ನ 4 ಕ್ಷೇತ್ರಗಳ ಚುನಾವಣಾ ಫಲಿತಾಂಶ: 3 ಪಕ್ಷಗಳ 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಪ್ರಾತಿನಿಧಿಕ ಚಿತ್ರ

ಜೂ.13ರಂದು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ. 

ಬೆಂಗಳೂರು: ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣಾ ಫಲಿತಾಂಶ ಇಂದು ಹೊರಬಿಳಲಿದೆ. ವಾಯವ್ಯ ಪದವೀಧರ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟಕಗೊಳ್ಳಲಿದ್ದು, ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಸೇರಿದಂತೆ 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇ 59, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ 70, ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಕಾಂಗ್ರೆಸ್​, ಬಿಜೆಪಿ, ಜೆಡಿಎಸ್​​ ಸೇರಿ ಒಟ್ಟು 49 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 2,84,992 ಮತದಾರರು ಇದ್ದಾರೆ.

TV9 Kannada


Leave a Reply

Your email address will not be published.