ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆಯೂ ಇಂದು 7ನೇ ಹಂತದ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತವರು ಕ್ಷೇತ್ರ ಬಾಬನಿಪುರ್ ಸೇರಿದಂತೆ 34 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 284 ಅಭ್ಯರ್ಥಿಗಳ ಭವಿಷ್ಯವನ್ನು ರಾಜ್ಯದ 86 ಲಕ್ಷ ಜನ ಮತದಾರರು ನಿರ್ಧರಿಸಲಿದ್ದಾರೆ.

ಚುನಾವಣೆ ಪ್ರಯುಕ್ತ 12 ಸಾವಿರದ 68 ಕೇಂದ್ರಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

The post ಇಂದು ಪಶ್ಚಿಮ ಬಂಗಾಳದಲ್ಲಿ 7ನೇ ಹಂತದ ಮತದಾನ appeared first on News First Kannada.

Source: News First Kannada
Read More