ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು 7 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡುವ ಗುರಿಯನ್ನು ರಾಜ್ಯ ಸರ್ಕಾರ ಹಾಕಿಕೊಂಡಿದೆ.

ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕಾ ಮೇಳಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ರಾಜ್ಯದ ಬಳಿ ಸದ್ಯ 14 ಲಕ್ಷ ಕೋವಿಶೀಲ್ಡ್ ಲಸಿಕೆಗಳ ದಾಸ್ತಾನಿದೆ ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇಂದು ಒಂದೇ ದಿನ 5 ರಿಂದ 7 ಲಕ್ಷ ಲಸಿಕೆಯನ್ನು ರಾಜ್ಯಾದ್ಯಂತ ನೀಡಬೇಕು ಅಂತ ಸರ್ಕಾರ ತಿಳಿಸಿದೆ.

The post ಇಂದು ರಾಜ್ಯದಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ appeared first on News First Kannada.

Source: newsfirstlive.com

Source link