ವಾರಣಾಸಿ: ಇಂದು ಪ್ರಧಾನಿ ಮೋದಿ ತಮ್ಮ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶದ ವಾರಣಾಸಿಯ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.

ಈ ವೇಳೆ ವಾರಣಾಸಿಯಲ್ಲಿ ಕೊರೊನಾ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಲಿದ್ದಾರೆ. ಇತ್ತೀಚೆಗೆ ಪ್ರಾರಂಭವಾದ ಪಂಡಿತ್ ರಾಜನ್ ಮಿಶ್ರ ಕೋವಿಡ್ ಆಸ್ಪತ್ರೆ ಸೇರಿದಂತೆ ವಾರಣಾಸಿಯ ವಿವಿಧ ಕೊರೊನಾ ಆಸ್ಪತ್ರೆಗಳ ಕಾರ್ಯಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ರಾಜ್ಯ ಸರ್ಕಾರದ ಅಂಕಿಅಂಶಗಳ ಪ್ರಕಾರ ಉತ್ತರಪ್ರದೇಶದಲ್ಲಿ ನಿನ್ನೆ 238 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 18,590ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 6,725 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈವರೆಗೆ ದಾಖಲಾದ ಒಟ್ಟರೆ ಕೇಸ್​ ಸಂಖ್ಯೆ 16,51,532ಕ್ಕೆ ಏರಿದೆ.

The post ಇಂದು ವಾರಣಾಸಿಯ ವೈದ್ಯರು-ಆರೋಗ್ಯ ಕಾರ್ಯಕರ್ತರ ಜೊತೆ ಮೋದಿ ಸಂವಾದ appeared first on News First Kannada.

Source: newsfirstlive.com

Source link