ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೇ ಅಲೆಯ ಸೋಂಕು ಕಡಿಮೆ ಆಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಭಾಷಣ ಮಾಡಲು ಮುಂದಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ಪ್ರಧಾನಿ ಮೋದಿ 2 ಬಾರಿ ಸಿಎಂಗಳ ಜೊತೆ ಸಭೆ ನಡೆಸಿದ್ದಾರೆ. ಸೋಂಕು ಕಡಿಮೆ ಆಗುತ್ತಿರುವ ರಾಜ್ಯಗಳಲ್ಲಿ ಅನ್‍ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಇದನ್ನೂ ಓದಿ: ಗ್ರಾಮೀಣ ಭಾರತ ಕೊರೊನಾ ಮುಕ್ತವಾಗ್ಬೇಕು, ಪ್ರತಿ ಹಳ್ಳಿಗಳನ್ನು ಕೋವಿಡ್‍ನಿಂದ ರಕ್ಷಿಸಿ: ಮೋದಿ

ಕಳೆದ ವರ್ಷ ಬಂದ ಮೊದಲ ಅಲೆಯಲ್ಲಿ ಮೋದಿ ಹಲವು ಬಾರಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಈ ಬಾರಿ ಎರಡು  ಬಾರಿ ಮಾತ್ರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು.

The post ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ appeared first on Public TV.

Source: publictv.in

Source link