ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ 44,473 ಮಂದಿ ಬಿಡುಗಡೆ ಹೊಂದಿದ್ದಾರೆ. ಇಂದು ಒಟ್ಟು 16,604 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದ ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ ಒಟ್ಟು 3,992 ಕೇಸ್ ದಾಖಲಾಗಿದ್ದು, 242 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,13,730 ಆಗಿದ್ದು, ಈವರೆಗೆ 22,61,590 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದಿನ ಪಾಸಿಟಿವಿಟಿ ರೇಟ್ 13.57 ಆಗಿದ್ದು, ಮೈಸೂರಿನ 25 ವರ್ಷದ ಯುವಕ ಸೇರಿ ಒಟ್ಟು 411 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಡೆತ್ ರೇಟ್ ಶೇ.2.47 ಆಗಿದೆ.ಇದನ್ನೂ ಓದಿ: ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಗೆ ಮಾಂಸದೂಟ – ಜಿಲ್ಲಾಡಳಿತದ ಕಾರ್ಯಕ್ಕೆ ಮೆಚ್ಚುಗೆ

ಇಂದು 23,560 ಆಂಟಿಜನ್ ಟೆಸ್ಟ್, 98,769 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 12.23,329 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 17,76,37 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್‍ನಿಂದ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆ : ಶೆಟ್ಟರ್

ಮೈಸೂರು 1,171, ಹಾಸನ 1,162, ಬೆಳಗಾವಿ 910, ತುಮಕೂರು 806, ಮಂಡ್ಯ 753, ಚಿತ್ರದುರ್ಗ 731 ಮತ್ತು ದಕ್ಷಿಣ ಕನ್ನಡದಲ್ಲಿ 651 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

The post ಇಂದು 44,473 ಮಂದಿ ಆಸ್ಪತ್ರೆಯಿಂದ ಬಿಡುಗಡೆ- ಪಾಸಿಟಿವಿಟಿ ರೇಟ್ ಶೇ.13.57 appeared first on Public TV.

Source: publictv.in

Source link