ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ನ ಅಟ್ಟಹಾಸದ ಹಿನ್ನೆಲೆ, ಇಂದು 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಿ.ಎಸ್​​​ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಇಂದು ಬೆಳಗ್ಗೆ10:30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹಾಸನ, ಮೈಸೂರು, ಬೆಳಗಾವಿ, ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ಆರಂಭವಾಗಲಿದೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿಗಳು ಕೂಡ ಭಾಗಿಯಾಗಲಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಕೊರೊನಾ ವೈರಸ್‌ ಹರಡುವಿಕೆ, ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ನಾರಾಯಣ್ ಕೂಡ ಉಪಸ್ಥಿತರಿರಲಿದ್ದಾರೆ.

The post ಇಂದು 5 ಜಿಲ್ಲೆಗಳ ಡಿ.ಸಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್​ appeared first on News First Kannada.

Source: newsfirstlive.com

Source link