ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಶಿವಸೇನಾ ಸಂಸದ ಸಂಜಯ್ ರಾವತ್ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಇಂಧನ ಬೆಲೆಯನ್ನು 50ರೂಪಾಯಿಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು. ಇಂಧನ ಬೆಲೆ 100ರೂಪಾಯಿ ಏರದಂತೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ದೇಶದಲ್ಲಿ ಕೆಲ ದಿನಗಳಿಂದ ಪೆಟ್ರೋಲ್ ಬೆಲೆ 100 ರೂಪಾಯಿಗಿಂತ ಅಧಿಕವಾಗಿದೆ. ಆದ್ರೆ ಸರ್ಕಾರ ಮಾತ್ರ ನೆಪ ಹೇಳಿಕೊಂಡು ಬರುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದ ಬೆನ್ನಲ್ಲೇ ಶಿವಸೇನಾ, ಬಿಜೆಪಿ ವಿರುದ್ಧ ಕಿಡಿಕಾರಿದೆ. ಸದ್ಯ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು ಕೇವಲ 5 ರೂಪಾಯಿ ಕಡಿಮೆ ಮಾಡಿದ್ದು, ಕನಿಷ್ಠ 25 ರೂಪಾಯಿಗಳನ್ನು ಕಡಿಮೆ ಮಾಡಬೇಕಾಗಿತ್ತು ಎಂದು ಹೇಳಿದ್ದಾರೆ.