ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಇಳಿಮುಖವಾಗುತ್ತಾ ಬಂದಿದೆ. ಅದರೂ ಕೂಡ ಮತ್ತಷ್ಟು ಸೋಂಕು ಕಡಿಮೆಯಾಗಲು ಇನ್ನು ಒಂದು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಇದನ್ನೂ ಓದಿ: ಮೂವರನ್ನ ತೆಗೆದ್ರೆ ಬಿಎಸ್‍ವೈ ರಾಜೀನಾಮೆ ಕೊಡಬೇಕಾಗುತ್ತೆ: ಯತ್ನಾಳ್

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ. ಬಳಿ ಶಾಸಕ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ಜಿಲ್ಲಾಡಳಿತ ನೂತನವಾಗಿ ನಿರ್ಮಾಣ ಮಾಡಿದ್ದ 800 ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೂನ್ 7 ರಿಂದ 15ರ ವರಗೆ ಲಾಕ್‍ಡೌನ್ ವಿಸ್ತರಣೆ ಮಾಡಿದ್ರೆ ಅನಕೂಲವಾಗುತ್ತದೆ. ಇನ್ನು ಒಂದು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಬೇಕು ಎನ್ನುವುದು ನಮ್ಮೆಲ್ಲರ ಅಭಿಪ್ರಾಯ, ಆದರೆ ಸಿಎಂ ಬಿಎಸ್ ಯಡಿಯೂರಪ್ಪನವರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಪ್ರಣೀತಾ ಮದುವೆಗೆ ವಿಶ್ ಮಾಡಿದ ರಮ್ಯಾಗೆ ಅಭಿಮಾನಿಗಳ ಪ್ರಶ್ನೆ ನಿಮ್ದು ಯಾವಾಗ..?

ನಾನು ದಾವಣಗೆರೆಯ ಎಲ್ಲಾ ಶಾಸಕರ ಪರವಾಗಿ ಮನವಿ ಮಾಡುತ್ತೇನೆ ಲಾಕ್‍ಡೌನ್ ವಿಸ್ತರಣೆ ಮಾಡಬೇಕಿದೆ. ಅಲ್ಲದೆ ಎಲ್ಲಾ ಸಚಿವರ ಶಾಸಕರ ಅಭಿಪ್ರಾಯ ಲಾಕ್‍ಡೌನ್ ವಿಸ್ತರಣೆ ಮಾಡೋದಾಗಿದೆ. ಈ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ತಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಸುತ್ತೇವೆ. ಇನ್ನೂ ಎರಡು ವರ್ಷ ಸಿಎಂ ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರೆಯಿತ್ತಾರೆ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

The post ಇನ್ನು ಒಂದು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಬೇಕು: ಭೈರತಿ ಬಸವರಾಜ್ appeared first on Public TV.

Source: publictv.in

Source link