ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರ್ಗಮಿತ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ 15 ಕೋಟಿ ನೀಡುವ ಮೂಲಕ ಮೊದಲನೇ ಆಟಗಾರನಾಗಿ ರಿಟೈನ್ ಮಾಡಿಕೊಂಡಿದೆ.
ನಾಯಕನ ಸ್ಥಾನವನ್ನು ತ್ಯಜಿಸಿದರೂ ಒಬ್ಬ ಆಟಗಾರನಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲೇ ಮುಂದುವರಿಯುತ್ತಿರುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದಾರೆ. ರಿಟೈನ್ ಆದ ಬಳಿಕ ಮಾತನಾಡಿದ ಕೊಹ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದು ನೀಡಿದ್ದಾರೆ.
ಆರ್ಸಿಬಿಯೊಂದಿಗಿನ ಪಯಣ ಮತ್ತೆ ಮುಂದುವರಿದಿದೆ. ಇನ್ನೂ 3 ವರ್ಷಗಳ ಕಾಲ ಈ ಫ್ರಾಂಚೈಸಿಯ ಜೊತೆ ಇರುವುದು ತುಂಬಾ ಖುಷಿಯ ವಿಚಾರ. ಇನ್ನೂ ಅತ್ಯುತ್ತಮವಾದದ್ದು ಬರಲಿವೆ ಎನ್ನುವ ವಿಶ್ವಾಸದಲ್ಲಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿಕೆ ನೀಡಿದ್ದಾರೆ.