ಮೈಸೂರು: ಇನ್​​ಸ್ಪೆಕ್ಟರ್ ನಾರಾಯಣಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಜಿಲ್ಲಾ ಸತ್ರ ನ್ಯಾಯಾಲಯವು ವಜಾ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ವಿವಿಯ ಉತ್ತರ ಪತ್ರಿಕೆಯ ನಕಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್​​ಸ್ಪೆಕ್ಟರ್ ನಾರಾಯಣಸ್ವಾಮಿ ಸದ್ಯ ಅಮಾನತಾಗಿದ್ದಾರೆ. ನಕಲು ಮಾಡಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದಿದ್ದರು.

ನಕಲು ಮಾಡಿದ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸದೇ ಹಾಗೆಯೇ ಬಿಟ್ಟು ಕಳುಹಿಸಿರುವ ಆರೋಪ ಇವರ ಮೇಲಿದೆ. ಇದೀಗ ನಾರಾಯಣಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಕೋರ್ಟ್​ ವಜಾ ಮಾಡಿದೆ.

The post ಇನ್​​ಸ್ಪೆಕ್ಟರ್ ನಾರಾಯಣಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ appeared first on News First Kannada.

Source: newsfirstlive.com

Source link