ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ನಡೆದಿದೆ.
ಮೃತರನ್ನು ಬಾಗಲಕೋಟೆ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ (26), ಸ್ವಪ್ನಾ( 8), ಸಮರ್ಥ್ (4) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಂಡ, ಹೆಂಡತಿ, ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪತಿ ನಾಗೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಹಾಗೂ ಇಬ್ಬರು ಮಕ್ಕಳಿಗೆ ವಿಷ ನೀಡಲಾಗಿದೆ. ಪತ್ನಿ ಹಾಗೂ ಮಕ್ಕಳಿಗೆ ತಂದೆಯೇ ವಿಷವುಣಿಸಿ ಬಳಿಕ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬ ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.