ನಾಳೆ ಇಂಡೋ-ಆಫ್ರಿಕನ್ನರ ನಡುವೆ ಮೊದಲ ಏಕದಿನ ಪಂದ್ಯ ನಡೆಯಲಿದ್ದು, ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ಚರ್ಚೆ ನಡೆಯುತ್ತಿದೆ. ಕೆ.ಎಲ್ ರಾಹುಲ್ ಹಾಗೂ ಶಿಖರ್ ಧವನ್ ತಂಡದ ಪರ ಇನ್ನಿಂಗ್ಸ್ ಶುರು ಮಾಡುವುದು ಕನ್ಫರ್ಮ್ ಆಗಿದೆ. ಆದರೆ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ಸರಣಿಯುದ್ದಕ್ಕೂ ಬೆಂಚ್ ಕಾಯೋದು ಕನ್ಫರ್ಮ್ ಆಗಿದೆ.
ಇನ್ನು ಮಿಡಲ್ ಆರ್ಡರ್ನಲ್ಲಿ ಯುವ ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಯಾರೆಲ್ಲಾ ಕಣಕ್ಕಿಳಿಯಬಹುದು ಎಂಬುದು ತೀವ್ರ ಕುತೂಹಲ ಕೆರಳಿಸಿದೆ. 3ನೇ ಕ್ರಮಾಂಕದಲ್ಲಿ ಎಂದಿನಂತೆ ವಿರಾಟ್ ಕೊಹ್ಲಿಯೇ ಕಣಕ್ಕೆ ಇಳಿಯಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಿದ್ರೆ, 5ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಲಿದ್ದಾರೆ.
ಇನ್ನು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್, ಆಲ್ರೌಂಡರ್ ಆಗಿ ಶಾರ್ದೂಲ್ ಠಾಕೂರ್ ಆಡೋದು ಕೂಡ ಖಚಿತವಾಗಿದೆ. ಇನ್ನು ಬೌಲರ್ಗಳಲ್ಲಿ ಚಹಲ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಉಪನಾಯಕ ಜಸ್ಪ್ರಿತ್ ಬೂಮ್ರಾ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.