ಕರ್ನಾಟಕ ಕ್ರಶ್ ರಶ್ಮಿಕಾ ಮಂದಣ್ಣ ಈಗ ಬಹುಭಾಷಾ ನಟಿ. ಇತ್ತೀಚೆಗೆ ರಿಲೀಸ್ ಆದ ತಮ್ಮ ಪುಷ್ಪ: ದಿ ರೈಸ್ ಹಿಟ್ ಆದ ಬಳಿಕ ರಶ್ಮಿಕಾ ಮಂದಣ್ಣ ಸಕ್ಸಸ್ ಅಲೆಯಲ್ಲಿ ತೇಲಾಡುತ್ತಿದ್ದಾರೆ. ಮೂಲಗಳ ಪ್ರಕಾರ, ರಶ್ಮಿಕಾ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ತೆಲುಗು ನಟ ವಿಜಯ್ ದೇವರಕೊಂಡ ಜೊತೆ ತುಸು ಹೆಚ್ಚೇ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಇವರೊಂದಿಗೆ ಡೇಟ್ ಮಾಡುತ್ತಿರಬಹುದು ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಬ್ಬರು ರಿಲೇಶನ್ಶೀಪ್ನಲ್ಲಿ ಇದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.
ಈ ನಡುವೆ ಮಾಧ್ಯಮದವರೊಂದಿಗೆ ಮಾತಾಡಿದ ರಶ್ಮಿಕಾ ಮಂದಣ್ಣ, ಮದುವೆ ಯಾವಾಗ? ಯಾರೊಂದಿಗೆ? ಎಂದು ಹೇಳಿದ್ದಾರೆ. ನನಗೆ ತುಂಬಾ ಗೌರವ ನೀಡುವ ಮತ್ತು ಪ್ರೀತಿ ತೋರುವ ವ್ಯಕ್ತಿಯನ್ನು ಮದುವೆಯಾಗುತ್ತೇನೆ ಎಂದಿದ್ದಾರೆ. ನಾನು ಮದುವೆ ಆಗೋ ಹುಡುಗ ನನ್ನನ್ನು ಸುರಕ್ಷತೆಯಿಂದ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.