ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸುವೆ ಎಂದ ಕಂದಾಯ ಸಚಿವ – The Revenue Minister said that he will discuss the Kannada Rajyotsava celebration at Idga Maidan with the Advocate General


ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರದ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ನಾನು ಮಾತನಾಡುವೇ. ಕಾನೂನು ಸಲಹೆ ಪಡೆದು ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರದ ಬಗ್ಗೆ ಅಡ್ವೊಕೇಟ್ ಜನರಲ್ ಜೊತೆ ನಾನು ಮಾತನಾಡುವೇ. ಕಾನೂನು ಸಲಹೆ ಪಡೆದು ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸೌಧದಲ್ಲಿ ಹೇಳಿದರು.

ಚಾಮರಾಜಪೇಟೆ ಆಟದ ಮೈದಾನದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ವಿಚಾರವಾಗಿ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ಮಾಡುವೇ, ಸ್ವಾತಂತ್ರ್ಯ ದಿನದ ರೀತಿ, ನವೆಂಬರ್ 1ರಂದು ಈ ಮೈದಾನದಲ್ಲಿ ಕಾರ್ಯಕ್ರಮ ಕೂಡ ನಡೆಯಬೇಕು ಎಂದು ಇದೆ, ಆದರೆ ಈ ವಿಚಾರವಾಗಿ ಸುಪ್ರೀಂ ಕೋರ್ಟ್​ನಲ್ಲಿ ಕೇಸ್ ಇದೆ. ಲೀಗಲ್ ಒಪೀನಿಯನ್ ಪಡೆದು ನಿರ್ಧಾರ ಮಾಡ್ತೇವೆ ಎಂದು ಹೇಳಿದ್ದಾರೆ.

ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Chamrajpet Idgah Maidan) ಸ್ವಾತಂತ್ರ್ಯೋತ್ಸವ ಆಯ್ತು. ಕಂದಾಯ ಇಲಾಖೆಯಿಂದ ಅದ್ದೂರಿಯಾಗಿ ತ್ರಿವರ್ಣ ಧ್ವಜ ಹಾರಿಸಲಾಯ್ತು. ಇದೀಗ ಕನ್ನಡ ರಾಜ್ಯೋತ್ಸವದ ಕಿಚ್ಚು ಹೆಚ್ಚಾಗಿದೆ. ಈದ್ಗಾ ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕೆಂಬ ಕೂಗು ಜೋರಾಗಿ ಕೇಳಿ ಬರುತ್ತಿರುವ ಕಾರಣ ಸಚಿವರು ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ನಡೆಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಬೇಕೆಂಬ ನಾಗರೀಕರು ಹಾಗೂ ಹಿಂದೂ ಸಂಘಟನೆಗಳು ಕನಸು ನನಸಾಗಿತ್ತು. ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸುಪ್ರೀಂ ಕೋರ್ಟ್ ಅನುಮತಿ ಕೊಟ್ಟಿರಲಿಲ್ಲ. ಇದೀಗ ಮೈದಾನದಲ್ಲಿ ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕೆಂದು ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿದೆ.

ಸಾತಂತ್ರ್ಯ ದಿನಾಚರಣೆ ರೀತಿಯೇ ಜಿಲ್ಲಾಡಳಿತದಿಂದಲೇ ಕನ್ನಡ ಧ್ವಜ ಹಾರಾಡುಬೇಕು ಎಂದು ಹೇಳಲಾಗಿತ್ತು. ಈ ಸಂಬಂಧ ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿ ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಲಾಗಿದೆ. ಈಗಾಗಲೇ ಕಂದಾಯ ಸಚಿವ ಆರ್.ಅಶೋಕ್​ ಅವರನ್ನು ಒಕ್ಕೂಟ ಭೇಟಿ ಮಾಡಿದೆ. ಕಂದಾಯ ಸಚಿವರಿಂದ ಮೌಕಿಕವಾಗಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಗೆ ಕಂದಾಯ ಸಚಿವರ ಸಲಹೆ ನೀಡಿದ್ದಾರೆ‌. ಆದರೆ ಇದೀಗ ಈ ಬಗ್ಗೆ ಸುಪ್ರೀಂ ಕೋರ್ಟ್ ಮೈದಾನದ ಬಗ್ಗೆ ಕೇಸ್ ಇರುವುದರಿಂದ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ನಡೆಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.