ಬೆಂಗಳೂರು: ಕಾಂಗ್ರೆಸ್ಸಿಗರು ಸದನದಲ್ಲಿ ಕೆಲವೊಂದು ಆಯ್ದ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ, ಸದನದ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ.
ಸದನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಈಶ್ವರಪ್ಪ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿದ ಅವರು.. ಇವತ್ತು ಕಾಂಗ್ರೆಸ್ ನಡೆದುಕೊಂಡಿರುವ ರೀತಿ ಅವ್ರು ಹತಾಶರಾದಂತೆ ಕಾಣುತ್ತೆ. ಇದು ಅವರ ರಾಜಕೀಯ ದಿವಾಳಿತನ ಅಷ್ಟೇ.
ಸದನದಲ್ಲಿ ರಾಜ್ಯಪಾಲ್ಯರ ಭಾಷಣದ ಬಗ್ಗೆ ಚರ್ಚೆ ಮಾಡಬಹುದಿತ್ತು. ಇನ್ನುಳಿದಂತೆ ಸಾಕಷ್ಟು ಸಮಸ್ಯೆಗಳ ಕುರಿತು ಚರ್ಚಿಸಬಹುದಿತ್ತು. ಆದರೆ ಅವರಿಗೆ ಜನರ ಸಮಸ್ಯೆ ಬೇಕಾಗಿಲ್ಲ. ಆಯ್ದ ವಿಚಾರಗಳನ್ನ ಮಾತ್ರ ಚರ್ಚಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.