ಮೈಸೂರು: ಮೇಟಗಳ್ಳಿಯಲ್ಲಿರುವ ನೂತನ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಉದ್ಘಾಟನೆ ಬಳಿಕ ಮಾತನಾಡಿದ ಸಂಸದ ಪ್ರತಾಪ್​ ಸಿಂಹ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಹಾಡಿಹೊಗಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂಧರ್ಭದಲ್ಲಿ ಆಸ್ಪತ್ರೆಯ ಶಂಕು ಸ್ಥಾಪನೆಯಾಗಿತ್ತು..127 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗಿದೆ. ಇದಕ್ಕೆ ಸಿದ್ದರಾಮಯ್ಯನವರು ಅನುದಾನ ನೀಡಿದ್ದಾರೆ. ಟ್ರಾಮಾ‌ ಸೆಂಟರ್, ಜಯದೇವ ಆಸ್ಪತ್ರೆ,‌ ನೂತನ ಜಿಲ್ಲಾಸ್ಪತ್ರೆಗೆ ಸಿದ್ದರಾಮಯ್ಯ ಅನುದಾನ ಕೊಟ್ಟಿದ್ದಾರೆ. ಅದೇ ರೀತಿ ಈ ಸೂಪರ್ ಸ್ಪೆಷಲಿಟಿ ಆಸ್ಪತ್ರೆಗೆ ಅನುದಾನ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಕೊಡುಗೆಯಿಂದ‌ ಕೊರೊನಾ ಸಂಧರ್ಭದಲ್ಲಿ ಅನುಕೂಲಕ್ಕೆ ಬಂದಿದೆ. ಸಿದ್ದರಾಮಯ್ಯನವರು ಮೈಸೂರಿನ ಬಗ್ಗೆ ಸಾಕಷ್ಟು ಕಾಳಜಿ ವಹಿಸಿ, ಅನುದಾನ ನೀಡಿದ್ದಾರೆ. ಇದಕ್ಕೆ‌ ನಾನು ಸಿದ್ದರಾಮಯ್ಯ ಸಾಹೇಬರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

The post ಈ ಕಾರಣಕ್ಕೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ರು ಪ್ರತಾಪ್‌ಸಿಂಹ appeared first on News First Kannada.

Source: newsfirstlive.com

Source link