ಬೆಂಗಳೂರು: ಕೋವಿಡ್-19 ರ 2ನೇ ಅಲೆ ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಕರ್ನಾಟಕ ಮೋಟಾರು ವಾಹನ ತೆರಿಗೆ ಪಾವತಿಯ ಅವಧಿಯನ್ನ ಸರ್ಕಾರ ವಿಸ್ತರಣೆ ಮಾಡಿದೆ ಅಂತ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದಾರೆ.

1957ಕಲಂ 4 (1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ದಿನಾಂಕ 15-06-2021ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ದಿನಾಂಕ 30-06-2021ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಸರ್ಕಾರ ಕೈಗೊಂಡಿರುವ ಈ ಕ್ರಮದ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಚಿವರಾದ ಲಕ್ಷ್ಮಣ್ ಸವದಿ ಅವರು ಮನವಿ ಮಾಡಿಕೊಂಡಿದ್ದಾರೆ.

The post ಈ ತಿಂಗಳ ಅಂತ್ಯದವರೆಗೆ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ: ಲಕ್ಷ್ಮಣ ಸವದಿ appeared first on News First Kannada.

Source: newsfirstlive.com

Source link