ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು?- ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಹೆಚ್​ಡಿ ಕುಮಾರಸ್ವಾಮಿ | Ex cm HD Kumaraswamy again twitted against Siddaramaiah


ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು?- ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಹೆಚ್​ಡಿ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮೂಲಕ ಆಕ್ರೋಶ ಹೊರಹಾಕುತ್ತಿರುತ್ತಾರೆ. ಇಂದು ಕೂಡಾ ಟ್ವೀಟ್​ನಲ್ಲಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ, ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಪಾಪಕ್ಕೆ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಎಂದು ಪ್ರಶ್ನಿಸಿದ್ದಾರೆ. ಹ್ಯೂಬ್ಲೆಟ್ ವಾಚ್ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳಿವೆ. ಈ ಎರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? ಎಂದು ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ, ನಾಚಿಕೆ ಆಗುವುದಿಲ್ಲವೇ? ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಹಣದ ಅಸಲೀಯೆತ್ತು ನನಗೂ ಗೊತ್ತು. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು? Mr.ಸುಳ್ಳುರಾಮಯ್ಯ, ದಿನಕ್ಕಿಷ್ಟು ಸುಳ್ಳು, ಕ್ಷಣಕ್ಕೊಂದು ಪೊಳ್ಳು. ನೀವು ರಾಜಕೀಯ ಊಸರವಳ್ಳಿ ಅಂತ ಕುಮಾರಸ್ವಾಮಿ ಗುಡುಗಿದ್ದಾರೆ.

ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಶುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ? ಅಂತ ಸಿದ್ದರಾಮಯ್ಯಗೆ ಪ್ರಶ್ನಿಸಿದ್ದಾರೆ.

ನಾವು ಜಲಧಾರೆ ಮಾಡುತ್ತಿದ್ದೇವೆ, ನಿಜ. ನೀರಾವರಿ ಯೋಜನೆಗಳ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಈ ರಾಜ್ಯಕ್ಕೆ ಹೆಚ್ ಡಿ ದೇವೇಗೌಡರು ಕೊಟ್ಟ ಕೊಡುಗೆ ಕಣ್ಮುಂದೆಯೇ ಇದೆ. 1962ರಿಂದ ಅವರು ನಡೆಸಿದ ಹೊರಾಟದ ಬಗ್ಗೆ ತಿಳಿದು ಮಾತನಾಡಿ. ಅರಿವುಗೆಟ್ಟ ಹೇಳಿಕೆ ಕೊಟ್ಟು ಅಪಹಾಸ್ಯಕ್ಕೆ ಗುರಿಯಾಗಬೇಡಿ ಅಂತ ಕುಮಾರಸ್ವಾಮಿ ಹೇಳಿದರು.

TV9 Kannada


Leave a Reply

Your email address will not be published.