ಉಡುಪಿ: ಜಿಲ್ಲಾಧಿಕಾರಿ ಹೆಸರಿನಲ್ಲಿ ಮೂರನೇ ಬಾರಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಮತ್ತೆ ಹಣದ ಬೇಡಿಕೆ ಇಡಲಾಗಿದೆ ಅನ್ನೋ ಮಾಹಿತಿಯನ್ನ ಜಿಲ್ಲಾಧಿಕಾರಿ ಜಿ. ಜಗದೀಶ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಎರಡು ಬಾರಿ ಉಡುಪಿ ಡಿಸಿ ಎಂಬ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು. ಮೇ 31ರಂದು ಮೂರನೇ ಬಾರಿ ನಕಲಿ ಫೇಸ್ಬುಕ್ ಖಾತೆ ತೆರೆದು, ಅದರಲ್ಲಿ ಪ್ರೊಫೈಲ್​ಗೆ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಲಾಗಿದೆ. ಅಲ್ಲದೇ, ಕಂಡ ಕಂಡವರಿಗೆ ಫ್ರೆಂಡ್​ ರಿಕ್ವೆಸ್ಟ್ ಕಳುಹಿಸಿ, ಹಣ ಬೇಡಿಕೆ ಇಟ್ಟಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ  ಜಿಲ್ಲಾಧಿಕಾರಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

The post ಉಡುಪಿ DC ಹೆಸರಲ್ಲಿ ಮತ್ತೆ ನಕಲಿ ಫೇಸ್​ಬುಕ್​ ಅಕೌಂಟ್​; ಹಣಕ್ಕೆ ಬೇಡಿಕೆಯಿಟ್ಟ ಕಿಡಿಗೇಡಿಗಳು appeared first on News First Kannada.

Source: newsfirstlive.com

Source link