ಮಳೆಯ ಅವಾಂತರ ಮುಂದುವರೆದಿದ್ದು, ಮಳೆಯಿಂದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜಿಲ್ಲೆಯ ದಿಬ್ಬೂರು ಹಾಗೂ ತುಮಕೂರು ನಗರಕ್ಕೆ ಸಂಪರ್ಕ ಮಾಡುವ ರಸ್ತೆ ಜಲಾವೃತವಾಗಿದೆ.

ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ (rain) ಅಬ್ಬರ ಮುಂದುವರೆದಿದ್ದು, ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತ ಹಿನ್ನೆಲೆ ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಥಳೀಯ ಆಡಳಿತ ಗುಡ್ಡದ ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಿದೆ. ನಾಲ್ಕು ದಿನದ ಹಿಂದೆ ಮುಟ್ಠಳ್ಳಿಯಲ್ಲಿ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದು ನಾಲ್ವರು ಮೃತಪಟ್ಟಿದ್ದರು. ಈಗ ಮತ್ತೆ ಗುಡ್ಡ ಕುಸಿದಿರುವುದರಿಂದ ಜನರು ಆತಂಕಗೊಂಡಿದ್ದಾರೆ.