ಉತ್ತರ ಪ್ರದೇಶದಲ್ಲಿ ಝೀಕಾ ವೈರಸ್​ ಆತಂಕ.. 79ಕ್ಕೇರಿದ ಸೋಂಕಿತರ ಸಂಖ್ಯೆ


ಲಕ್ನೋ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್​ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈವರೆಗೆ 79 ಪ್ರಕರಣಗಳು ದಾಖಲಾಗಿವೆ. ಈ ಹಿನ್ನಲೆ ಇಂದು ಸಿಎಂ ಯೋಗಿ ಆದಿತ್ಯನಾಥ್​ ಆರೋಗ್ಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಸೋಂಕಿನ ಹರಡುವಿಕೆಯನ್ನ ತಡೆಯಲು ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಿದ್ದಾರೆ. ಸದ್ಯ ನಿನ್ನೆ ಒಂದೇ ದಿನ ಕಾನ್ಪುರದಲ್ಲಿ 13 ಹೊಸ ಝೀಕಾ ವೈರಸ್​ ಪ್ರಕರಣಗಳು ದಾಖಲಾಗಿವೆ. ಪ್ರತಿನಿತ್ಯ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಆರೋಗ್ಯ ಇಲಾಖೆಯು ಸಹ ಪ್ರತಿ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡುತ್ತಿದೆ. ಜೊತೆಗೆ, ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುವಂತೆ ಜಾಗೃತಿ ಮೂಡಿಸುತ್ತಿದೆ.

ಇನ್ನು ಮಹಾರಾಷ್ಟ್ರದಲ್ಲಿ ಆಗಸ್ಟ್​​ ತಿಂಗಳಿನಲ್ಲಿ ಮೊದಲ ಝೀಕಾ ಸೋಂಕಿನ ಪ್ರಕರಣ ವರದಿಯಾಗಿತ್ತು. ಇದನ್ನು ಹೊರತು ಪಡಿಸಿದರೇ ಈ ವರ್ಷ ಕೇರಳದಲ್ಲಿ ಮಾತ್ರ ಝೀಕಾ ವೈರಸ್​​ ಸೋಂಕು ಪತ್ತೆಯಾಗಿತ್ತು. ಉತ್ತರ ಪ್ರದೇಶದಲ್ಲಿ ಝೀಕಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರೋ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್​​ ಘೋಷಣೆ ಮಾಡಲಾಗಿದ್ದು, ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

News First Live Kannada


Leave a Reply

Your email address will not be published.