ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​ಗೆ ಜೀವ ಬೆದರಿಕೆ; ಬಾಂಬ್ ಹಾಕುವುದಾಗಿ ವಾಟ್ಸಾಪ್ ಸಂದೇಶ | Uttar Pradesh CM Yogi Adityanath Gets Death Threat on Lucknow Police Helpline WhatsApp Probe Begins


ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಾಂಬ್ ಹಾಕುವುದಾಗಿ ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​​ಗೆ ಜೀವ ಬೆದರಿಕೆ; ಬಾಂಬ್ ಹಾಕುವುದಾಗಿ ವಾಟ್ಸಾಪ್ ಸಂದೇಶ

ಯೋಗಿ ಆದಿತ್ಯನಾಥ್

ನವದೆಹಲಿ: ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಬಾಂಬ್ ಬೆದರಿಕೆ ಬಂದಿದೆ. ಅಪರಿಚಿತರು ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ವಾಟ್ಸಾಪ್ ಸಹಾಯವಾಣಿಗೆ (WhatsApp Helpline) ಜೀವ ಬೆದರಿಕೆ ಇರುವ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಬಂದಿರುವುದರಿಂದ ಅವರ ನಿವಾಸ, ಕಚೇರಿಯ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.

ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿಗೆ ಬಾಂಬ್ ಹಾಕುವುದಾಗಿ ಆಗಸ್ಟ್ 2ರಂದು ಪೊಲೀಸ್ ನಿಯಂತ್ರಣ ಕೊಠಡಿಯ ಸಹಾಯವಾಣಿಗೆ ವಾಟ್ಸಾಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಸಹಾಯವಾಣಿಯ ಕಾರ್ಯ ನಿರ್ವಾಹಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸಂದೇಶ ಕಳುಹಿಸುವವರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಹುಡುಕಾಟ ನಡೆಸಲಾಗುತ್ತಿದೆ. ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TV9 Kannada


Leave a Reply

Your email address will not be published. Required fields are marked *