ಅಖಿಲೇಶ್ ಯಾದವ್
ದೆಹಲಿ: ಅಖಿಲೇಶ್ ಯಾದವ್ ಅವರು ಹಲವು ಗೊಂದಲಗಳ ನಂತರ ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ. ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದ ಪ್ರತಿಯೊಂದು ಸ್ಥಾನದ ಮೇಲೆ ಕೇಂದ್ರೀಕರಿಸಲು ಆದ್ಯತೆ ನೀಡುವುದಾಗಿ ಅಖಿಲೇಶ್ ಈ ಹಿಂದೆಯೇ ಹೇಳಿದ್ದರು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಆಜಂಗಢದಿಂದ ಲೋಕಸಭೆಯ ಸಂಸದರಾಗಿದ್ದು, ಇದುವರೆಗೆ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಅವರ ಸ್ಥಾನವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಆಜಂಗಢದ ಲೋಕಸಭಾ ಸಂಸದರಾದ ಅಖಿಲೇಶ್ ಯಾದವ್, ಉತ್ತರ ಪ್ರದೇಶ ಚುನಾವಣೆಯಲ್ಲಿಆಜಂಗಢದ ಗೋಪಾಲ್ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ಸಿಎನ್ಎನ್-ನ್ಯೂಸ್ 18 ವರದಿ ಮಾಡಿದೆ . ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ರಾಜ್ಯದ ಪ್ರತಿಯೊಂದು ಸ್ಥಾನದ ಮೇಲೆ ಕೇಂದ್ರೀಕರಿಸಲು ಆದ್ಯತೆ ನೀಡುವುದಾಗಿ ಅವರು ಈ ಹಿಂದೆಯೇ ಹೇಳಿದ್ದರು. ಉತ್ತರ ಪ್ರದೇಶದ ಹಾಲಿ ಮುಖ್ಯಮಂತ್ರಿ ಬಿಜೆಪಿಯ ಯೋಗಿ ಆದಿತ್ಯನಾಥ ಅವರು ಮೊದಲ ಬಾರಿಗೆ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಮೇಲೆ ಒತ್ತಡವಿದೆ ಎಂದು ಮೂಲಗಳು ತಿಳಿಸಿವೆ. ಯೋಗಿ ಆದಿತ್ಯನಾಥ್ಅವರು ಪೂರ್ವ ಯುಪಿಯ ಗೋರಖ್ಪುರ ಸದಾರ್ನಿಂದ ಸ್ಪರ್ಧಿಸಲಿದ್ದಾರೆ ಮತ್ತು ಪ್ರಭಾವಿ ಗೋರಖ್ಪುರ ಮಠದ ಮುಖ್ಯಸ್ಥರಾಗಿರುವ ಅರ್ಚಕ-ರಾಜಕಾರಣಿಯನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಈ ಪ್ರದೇಶದಲ್ಲಿ ದೊಡ್ಡ ಲಾಭ ಪಡೆಯಲಿದೆ. ಮೂಲಗಳ ಪ್ರಕಾರ, ಅಖಿಲೇಶ್ ಯಾದವ್ ಅವರು ಪೂರ್ವ ಯುಪಿ ಅಥವಾ ಲಖನೌದಂತ ಕೇಂದ್ರ ಕ್ಷೇತ್ರದಿಂದ ಒಂದು ಸ್ಥಾನವನ್ನು ಆಯ್ಕೆ ಮಾಡಬಹುದು. ಒಂದಕ್ಕಿಂತ ಹೆಚ್ಚು ಸ್ಥಾನಗಳಿಂದ ಸ್ಪರ್ಧಿಸುವುದು ಕೂಡ ಚರ್ಚೆಯಲ್ಲಿದೆ.
ದೆಹಲಿಯಲ್ಲಿ ಅವರ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ ಸೇರಿದ ದಿನವೇ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವರದಿಗಳು ಬಂದಿದೆ. ನವೆಂಬರ್ನಲ್ಲಿ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು. ಆದರೆ ಅಂತಹ ನಿರ್ಧಾರವನ್ನು ಪಕ್ಷವು ಇನ್ನೂ ತೆಗೆದುಕೊಂಡಿಲ್ಲ ಎಂದು ಸಮಾಜವಾದಿ ಪಕ್ಷ ಹೇಳಿತ್ತು. “ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಸಮಾಜವಾದಿ ಸಂಸದರು ಹೇಳಿರುವುದಾಗಿ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)