ಉತ್ತರ ಪ್ರದೇಶ: ಬೀದಿಯಲ್ಲಿ ಮಹಿಳೆಯರಿಗೆ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್, ವೈರಲ್ ವಿಡಿಯೊ – Video Shows Uttar Pradesh policemen raining lathis on women and shouting abuses


ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದಾರೆ.

ಉತ್ತರ ಪ್ರದೇಶ: ಬೀದಿಯಲ್ಲಿ ಮಹಿಳೆಯರಿಗೆ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್, ವೈರಲ್ ವಿಡಿಯೊ

ಮಹಿಳೆಯರ ಮೇಲೆ ಲಾಠಿ ಪ್ರಹಾರ

ಅಂಬೇಡ್ಕರ್ ನಗರ: ಉತ್ತರ ಪ್ರದೇಶದ (Uttar Pradesh) ಪೊಲೀಸರು ಮಹಿಳೆಯರ ಮೇಲೆ ಲಾಠಿ ಪ್ರಹಾರ (lathicharge) ಮಾಡುತ್ತಾ ಬೈಯುತ್ತಿರುವ ವಿಡಿಯೊವೊಂದು ವೈರಲ್ ಆಗಿದ್ದು, ಪೊಲೀಸರ ಅತಿರೇಕದ ವರ್ತನೆಯನ್ನು ಜನರು ಖಂಡಿಸಿದ್ದಾರೆ. ಮಹಿಳೆಯರು ನಮ್ಮ ವಾಹನಗಳ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ ನಂತರ ನಾವು ಬಲಪ್ರಯೋಗ ಮಾಡಿದೆವು ಎಂದು ಪೊಲೀಸರು ಹೇಳಿದ್ದಾರೆ.  ಇದೀಗ ವೈರಲ್ ಆಗಿರುವ ವಿಡಿಯೊ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದ್ದು. ಇತ್ತೀಚೆಗೆ ಈ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ವಿರುದ್ಧ ಪೊಲೀಸರು ಈ ರೀತಿ ವರ್ತಿಸಿದ್ದಾರೆ. ಪ್ರತಿಮೆ ಇರುವ ಭೂಮಿಯ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದೆ. ಭಾನುವಾರ ಘಟನಾ ಸ್ಥಳದಲ್ಲಿ ಮಹಿಳೆಯರ ಗುಂಪು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ಚದುರಿಸಲು ಆಗಮಿಸಿದ್ದರು. ಪೊಲೀಸರ ಪ್ರಕಾರ, ಕೆಲವು ಪ್ರತಿಭಟನಾಕಾರರು ಹಿರಿಯ ಅಧಿಕಾರಿ ಸೇರಿದಂತೆ ಪೊಲೀಸರ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದರು.

ಮತ್ತೊಂದು ವಿಡಿಯೊದಲ್ಲಿ ಕೆಲವು ಮಹಿಳೆಯರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೂದಲನ್ನು ಎಳೆದಾಡುತ್ತಿರುವುದು ಕಂಡುಬಂದಿದೆ. ಈ ಹೊತ್ತಲ್ಲೇ ಕೆಲವು ಪ್ರತಿಭಟನಾಕಾರರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು ಎಂದು ಅಂಬೇಡ್ಕರ್ ನಗರ ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ಕುಮಾರ್ ಸಿನ್ಹಾ ಹೇಳಿದರು.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಸಣ್ಣ ಬಲ ಪ್ರಯೋಗಿಸಬೇಕಾಯಿತು ಎಂದು ಅವರು ಹೇಳಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.