ಬೆಂಗಳೂರು: ಬೆಳ್ಳಂ ಬೆಳಗ್ಗೆ ನಗರದ ಉತ್ತರ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಚಿನ್ನಾಭರಣ ಕಳ್ಳತನ ಮಾಡ್ತಿದ್ದ ಖತರ್ನಾಕ್​ ಕಳ್ಳರನ್ನು ಬಂಧಿಸಿ ಚಿನ್ನಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಾಗಲಗುಂಟೆ, ನಂದಿನಿಲೇಔಟ್, ಆರ್ ಟಿ ನಗರ, ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ನಿರ್ಮಲಾ ಎಂಬ ಖತರ್ನಾಕ್​ ಲೇಡಿಯನ್ನ ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಗಂಗಮ್ಮನಗುಡಿ ಠಾಣಾ ವ್ಯಾಪ್ತಿಯಲ್ಲಿ ಕೂಡ ಪೊಲೀಸರು ಚುರುಕಿನ ಕಾರ್ಯಾಚರಣೆ ನಡೆಸಿದ್ದು ಕಳ್ಳನನ್ನು ಬಂಧಿಸಲು ಬೆನ್ನತ್ತಿದಾಗ ಕಳ್ಳ ಏರ್​ಪೋರ್ಸ್​ ಕೌಂಪೌಂಡ್ ಗೋಡೆಯನ್ನ ಜಿಗಿದಿದ್ದಾನೆ. ಪರಿಣಾಮ ಸೊಂಟ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿದೆ. ಈ ವೇಳೆ ವಶ ಪಡಿಸಿಕೊಂಡ ಪೊಲೀಸರು ಆತನಿಗೆ ಚಿಕಿತ್ಸೆ ಕೊಟ್ಟು ನಂತರ ಕಸ್ಟಡಿಗೆ ಪಡೆದಿದ್ದಾರೆ.

ವಿಚಾರಣೆ ವೇಳೆ ಆರೋಪಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವದು ಬೆಳಕಿಗೆ ಬಂದಿದ್ದು 17 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಹಾಗೂ ಲ್ಯಾಪ್ ಟ್ಯಾಪ್, ಕ್ಯಾಮೆರಾವನ್ನ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ನ್ಯೂಸ್​ಫಸ್ಟ್​ನ ಜೊತೆ ಮಾತನಾಡಿ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಐದು ಆರೋಪಿಗಳನ್ನ ಬಂಧಿಸಲಾಗಿದ್ದು, ಬಂಧಿತರಿಂದ 50 ಲಕ್ಷ ರೂ ಬೆಲೆ ಬಾಳುವ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

The post ಉತ್ತರ ವಿಭಾಗ ಪೊಲೀಸರ ಕಾರ್ಯಾಚರಣೆ: ಖತರ್ನಾಕ್​ ಕಳ್ಳರು ಅಂದರ್​ appeared first on News First Kannada.

Source: newsfirstlive.com

Source link