ಉಡುಪಿ: ನಾಳೆ ಉಪಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಪಚುನಾವಣೆ ಫಲಿತಾಂಶ ಸಂದರ್ಭ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ. ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ. ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸ್ಥಳೀಯ ವಿಚಾರದಲ್ಲಿ ಚುನಾವಣೆ ನಡೆದಿದೆ. ರಾಜ್ಯ, ದೇಶಮಟ್ಟದ ಚುನಾವಣೆ ನಡೆದಿಲ್ಲ. ಈ ಫಲಿತಾಂಶ ಸರ್ಕಾರದ ಮೇಲಿನ ಜನಾದೇಶ ಅಲ್ಲ ಎಂದು ತಿಳಿಸಿದರು.

The post ಉಪಚುನಾವಣೆ ಫಲಿತಾಂಶದಂದು ಸಂಭ್ರಮಾಚರಣೆಗೆ ಅವಕಾಶವಿಲ್ಲ: ಬೊಮ್ಮಾಯಿ appeared first on Public TV.

Source: publictv.in

Source link