ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತ; 25 ವರ್ಷದ ಕಾನೂನು ವಿದ್ಯಾರ್ಥಿ ಸಾವು | Student died by Heart attack when he eating breakfast in Mysuru


ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತ; 25 ವರ್ಷದ ಕಾನೂನು ವಿದ್ಯಾರ್ಥಿ ಸಾವು

ನಿತಿನ್ ಕುಮಾರ್(25)

ಮೈಸೂರು: ಉಪಹಾರ ಸೇವಿಸುತ್ತಿದ್ದ ವೇಳೆ ಹೃದಯಾಘಾತದಿಂದ (Heart attack) ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ಟಿಫಾನಿಸ್ ಹೋಂ ಹೋಟೆಲ್‌ನಲ್ಲಿ(Hotel) ನಡೆದಿದೆ. ನಂಜಾಪುರ ಗ್ರಾಮದ 25 ವರ್ಷದ ನಿತಿನ್ ಕುಮಾರ್(25) ಮೃತ ದುರ್ದೈವಿ. ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ(Student) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿ ಕುಸಿದು ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಚಿತ್ರದುರ್ಗ: ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ

ಮರಕ್ಕೆ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗೀತಾ(32), ಶಾರದಾ(60), ಧೃತಿ(5) ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೆ, ಬಾಲಕಿ ಧೃತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆನೇಕಲ್: ಮನೆ ಮುಂದೆ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿದ ಆರೋಪ; ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು

ಮನೆ ಮುಂದೆ ಮಹಿಳೆಯನ್ನು  ನಗ್ನಗೊಳಿಸಿ ಥಳಿಸಿದ ಆರೋಪ ಕೇಳಿಬಂದಿದ್ದು, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮಹಿಳೆ ದೂರು ನೀಡಿದ್ದಾರೆ. ಬೆಳ್ಳಂದೂರು ನಿವಾಸಿ ನಾಗರತ್ನ(46) ಎಂಬುವವರು ದೂರು ನೀಡಿದ್ದಾರೆ. ರಾಮು, ಮುನಿವೆಂಕಟಪ್ಪ ಇತರ 10 ಜನರ ವಿರುದ್ಧ ದೂರು ದಾಖಲಾಗಿದೆ. ಬೆಳ್ಳಂದೂರು ಪೊಲೀಸರ ವಿರುದ್ಧವೂ ನಿಂದನೆ ಆರೋಪ ಕೇಳಿಬಂದಿದೆ. ತಾಯಿ ಮನೆ ಬಳಿ ಕಸ ಕ್ಲೀನ್ ಮಾಡುವ ವೇಳೆ ತಕರಾರು ನಡೆದಿದೆ. ಮಾತಿಗೆ ಮಾತು ಬೆಳೆದು ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಾಗರತ್ನ ಆರೋಪಿಸಿದ್ದಾರೆ.

ತಾಳಿ ಕಿತ್ತುಕೊಂಡು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ಮಗನಿಗೆ ಪೊಲೀಸರು ಥಳಿಸಿದ್ದಾರೆ ಅಂತ ಮಹಿಳೆ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಜೊತೆಗೆ ಬೆಳ್ಳಂದೂರು ಪೊಲೀಸರು ದೂರು ಸ್ವಿಕರಿಸಲಿಲ್ಲ ಅಂತ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಸ್ಪಷ್ಟನೆ ಬೆಳ್ಳಂದೂರು ಠಾಣೆ ಪೊಲೀಸರು, ಮಹಿಳೆ ವರ್ತನೆ, ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ಹೇಳಿದ್ದಾರೆ.

TV9 Kannada


Leave a Reply

Your email address will not be published.