ಗುಣಮಟ್ಟದ ಊಟ, ಉಪಾಹಾರ ನೀಡುವುದಿಲ್ಲವೆಂದು ಆರೋಪಿಸಿ ಹಾಸ್ಟೆಲ್ ವಾರ್ಡನ್ ವಿರುದ್ಧ ಜಿಲ್ಲೆಯ ಸರಸ್ವತಿನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಪದವಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವಂತಹ ಘಟನೆ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
ದಾವಣಗೆರೆ: ಗುಣಮಟ್ಟದ ಊಟ, ಉಪಾಹಾರ ನೀಡುವುದಿಲ್ಲವೆಂದು ಆರೋಪಿಸಿ ಹಾಸ್ಟೆಲ್ ವಾರ್ಡನ್ ವಿರುದ್ಧ ಜಿಲ್ಲೆಯ ಸರಸ್ವತಿನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಪದವಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವಂತಹ ಘಟನೆ ನಡೆದಿದೆ. ಊಟ ಸರಿಯಿಲ್ಲವೆಂದರೆ ರೌಡಿಗಳನ್ನು ಕರೆಸಿ ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ಹಾಸ್ಟೆಲ್ ವಾರ್ಡನ್ ವಿರುದ್ಧ ಆರೋಪಿಸಿ ಪದವಿ ವಿದ್ಯಾರ್ಥಿಗಳು ಹಾಸ್ಟೆಲ್ ಹೊರಗೆ ರಾತ್ರಿ ವೇಳೆ ಧರಣಿ ಮಾಡಿದ್ದಾರೆ. ವಾರ್ಡನ್ ವಿರುದ್ಧ ಧಿಕ್ಕಾರ ಕೂಗಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಭೇಟಿ ನೀಡಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವುದಾಗಿ ಡಿಎಸ್ಒ ಭರವಸೆ ನೀಡಿದರು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಭರವಸೆ ಹಿನ್ನೆಲೆ ವಿದ್ಯಾರ್ಥಿಗಳು ಪ್ರತಿಭಟನೆ ವಾಪಸ್ ಪಡೆದಿದ್ದು, ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.