ಎಂಎಲ್​​ಸಿ ಚುನಾವಣೆ; ’15 ಸೀಟ್​ ನಿಶ್ಚಿತವಾಗಿ ಗೆಲ್ತೀವಿ’ -ಬಿಎಸ್​​ವೈ 4 ದಿನ ಜಿಲ್ಲಾ ಪ್ರವಾಸ ಆರಂಭ

ದಾವಣಗೆರೆ: ರಾಜ್ಯದಲ್ಲಿ ವಿಧಾನ ಪರಿಷತ್​​ ಚುನಾವಣೆಗೆ ನಿನ್ನೆ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಆಡಳಿತರೂಢ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖ ನಾಯಕರು ಚುನಾವಣಾ ಕಣಕ್ಕೆ ಧುಮುಕಲು ಸಿದ್ಧರಾಗಿದ್ದಾರೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಮುಖಂಡರು ನಾಲ್ಕು ದಿನಗಳ ಕಾಲ ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇನ್ನು20 ಸ್ಥಾನಗಳಲ್ಲಿ 15 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಯಡಿಯೂರಪ್ಪ ಪ್ರವಾಸ ಹೊರಡುವ ಮುನ್ನ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಇವತ್ತು ಚನ್ನಗಿರಿ, ಸಂತೆಬೆನ್ನೂರು, ಶಿವಮೊಗ್ಗ, ಶಿಕಾರಿಪುರದಲ್ಲಿ ಇವತ್ತು ಪ್ರವಾಸ ಮಾಡಲಿದ್ದು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿಶೇಷ ಪ್ರವಾಸ ಮಾಡುತ್ತಿದ್ದೇನೆ. ಚುನಾವಣೆಯಲ್ಲಿ ವಾತಾವರಣ ನಮಗೆ ಪೂರಕವಾಗಿದ್ದು, 25ರಲ್ಲಿ 20 ಕ್ಷೇತ್ರಗಳಲ್ಲಿ ನಾವು ಸ್ಪರ್ಧೆ ಮಾಡುತ್ತಿದ್ದು, 15 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಸಿಎಂ ಬಿಎಸ್​​ವೈ ಹೇಳಿದ್ರು.

News First Live Kannada

Leave a comment

Your email address will not be published. Required fields are marked *