ನವದೆಹಲಿ: ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡಬೇಕೆಂದು ಆರೋಗ್ಯ ಸಚಿವ ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚಿಸಿದರು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನ ಮಾನ ನೀಡುವಂತೆ ಮನವಿ ಮಾಡಿದ್ದಾರೆ.

 

ಜೊತೆಗೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆರೆಗಳ ಹೂಳೆತ್ತಲು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ. ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ವಿಸ್ತರಿಸಲು ಸಹಕರಿಸುವಂತೆ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚಿಸಿದ್ದಾರೆ.

ಇದೇ ವೇಳೆ ನೀತಿ ಆಯೋಗದ ಸದಸ್ಯ ವಿ.ಕೆ. ಪಾಲ್ ಅವರನ್ನು ಕೂಡ ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಕೊರೊನಾ ಲಸಿಕೆ ಪೂರೈಸುವಂತೆ ಮನವಿ ಮಾಡಿಕೊಂಡಿದ್ದಾರೆ.

The post ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡಿ -ಕೇಂದ್ರಕ್ಕೆ ಸುಧಾಕರ್ ಮನವಿ appeared first on News First Kannada.

Source: newsfirstlive.com

Source link