ಎದೆ ಜಲ್ಲ್ ಅನ್ನುತ್ತೆ ಡೆಡ್ಲಿ ಬೈಕ್ ವ್ಹೀಲಿಂಗ್! ವಿಡಿಯೋ ಇದೆ

Bike Wheeling

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ದೇವನಹಳ್ಳಿಯ ಬಳಿ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಡೆಡ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ. ಡೆಡ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯಗಳನ್ನ ನೋಡಿದರೆ ಒಂದು ಸಲ ಎದೆ ಜಲ್ಲ್ ಅನ್ನುತ್ತೆ. ಬೈಕ್ ಸಮೇತ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಏರ್ಪೋಟ್ ಸಂಚಾರಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಇತರೆ ವಾಹನ ಸವಾರರಿಗೆ ಕಿರಿಕಿರಿ ನೀಡುತ್ತಿದ್ದ. ದೇವನಹಳ್ಳಿ ಹೊರವಲಯದ ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಿ ಬೇರೆ ಸವಾರರಿಗೆ ತೊಂದರೆ ನೀಡುತ್ತಿದ್ದ. ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಏರ್ಪೋಟ್ ಸಂಚಾರಿ ಪೊಲೀಸರಿಂದ ವ್ಹೀಲಿಂಗ್ ಮಾಡುತ್ತಿದ್ದ ಪುಂಡನನ್ನ ಬೈಕ್ ಸಮೇತ ವಶಕ್ಕೆ ಪಡೆದಿದ್ದಾರೆ.

TV9 Kannada

Leave a comment

Your email address will not be published. Required fields are marked *