ಎನ್ಆರ್ಐ ಲೇಔಟ್ನ ಮನೆಯಲ್ಲಿ ಕಳ್ಳತನ
ಬೆಂಗಳೂರು: ಇಲ್ಲಿನ ಎನ್ಆರ್ಐ ಲೇಔಟ್ನ ಮನೆಯಲ್ಲಿ ಕಳ್ಳತನವಾದ ಘಟನೆ ಇಂದು (ನವೆಂಬರ್ 14) ಸಂಭವಿಸಿದೆ. ಶಿವಾನಂದ, ವೇದಾವತಿ ದಂಪತಿ ಮನೆಯಲ್ಲಿ ಕಳ್ಳತನ ಆಗಿದೆ. ಬೆಳಗ್ಗೆ 10ರ ಸುಮಾರಿಗೆ ವೇದಾವತಿ ತಾಯಿ ಮನೆಗೆ ತೆರಳಿದ್ದರು. ಮಧ್ಯಾಹ್ನ 1 ಗಂಟೆಗೆ ಮನೆಗೆ ಹಿಂದಿರುಗುವಷ್ಟರಲ್ಲಿ ಕಳ್ಳತನ ಆಗಿದೆ. 40 ಗ್ರಾಮ್ ಚಿನ್ನ, 4 ಸಾವಿರ ಹಣವನ್ನು ಕಳ್ಳರು ಕದ್ದೊಯ್ದಿದ್ದಾರೆ. ಬೆಳ್ಳಿ ಆಭರಣ ಬಿಟ್ಟು ಚಿನ್ನಾಭರಣ ಮಾತ್ರ ಕದ್ದೊಯ್ದಿದ್ದಾರೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ
ಒತ್ತಾಯಪೂರ್ವಕವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ಅದ್ದೆ ಗೇಟ್ ಬಳಿಯ ಶೆಡ್ಗೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲೂಕಿನ ಅದ್ದೆ ಗೇಟ್ನಲ್ಲಿ ಘಟನೆ ನಡೆದಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಭಾರಿ ಅಗ್ನಿ ಅವಘಡ
ಇದನ್ನೂ ಓದಿ: ಬೆಂಗಳೂರು: ಕಳ್ಳಸಾಗಣೆ ಮಾಡುತ್ತಿದ್ದ 170 ನಕ್ಷತ್ರ ಆಮೆಗಳ ರಕ್ಷಣೆ