ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ರಂಪಾಟ ಮಾಡಿದ್ದರು. ಘಟನೆ ಬಳಿಕ ಎಚ್ಚೆತ್ತ ಹಿರಿಯ ಅಧಿಕಾರಿಗಳಿಂದ ಪ್ರಭಾರ ಇನ್ಸ್ಪೆಕ್ಟರ್ ನಿಯೋಜನೆ ಮಾಡಲಾಗಿದೆ.

ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಬೆಂಗಳೂರಿನ ಜೆ.ಸಿ.ನಗರ ಠಾಣೆಗೆ ಪ್ರಭಾರಿ ಇನ್ಸ್ಪೆಕ್ಟರ್ ಆಗಿ ಎಟಿಸಿ ಇನ್ಸ್ಪೆಕ್ಟರ್ ಸುಬ್ರಮಣಿ ಅವರನ್ನು ನಿಯೋಜನೆ ಮಾಡಲಾಗಿದೆ. ಕೆಲ ದಿನಗಳ ಹಿಂದೆಯಷ್ಟೆ ಜೆ.ಸಿ ನಗರ ಠಾಣೆ ಇನ್ಸ್ಪೆಕ್ಟರ್ ವರ್ಗಾವಣೆಯಾಗಿದ್ದು, ವರ್ಗಾವಣೆ ಬಳಿಕ ಠಾಣಾ ಇನ್ಸ್ಪೆಕ್ಟರ್ ಹುದ್ದೆ ಖಾಲಿ ಇತ್ತು. ಠಾಣೆಗೆ ಹೊಸ ಇನ್ಸ್ಪೆಕ್ಟರ್ ನಿಯೋಜನೆಯಾಗಿರಲಿಲ್ಲ. ಅದೇ ಸಂದರ್ಭದಲ್ಲಿ ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ರಂಪಾಟ ಮಾಡಿದ್ದರು. ಘಟನೆ ಬಳಿಕ ಎಚ್ಚೆತ್ತ ಹಿರಿಯ ಅಧಿಕಾರಿಗಳಿಂದ ಪ್ರಭಾರ ಇನ್ಸ್ಪೆಕ್ಟರ್ ನಿಯೋಜನೆ ಮಾಡಲಾಗಿದೆ. ಜೆ.ಸಿ ನಗರ ಠಾಣಾ ವ್ಯಾಪ್ತಿಯಲ್ಲೆ ನಾಲ್ಕು ಸಚಿವರ ನಿವಾಸಗಳಿವೆ. ಜಯಮಹಲ್ ಏರಿಯಾದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ಪ್ರಭು ಚೌವ್ಹಾಣ್ ಹಾಗೂ ಬಿ.ಸಿ ಪಾಟೀಲ್, ಹಾಗೂ ಶಿವರಾಮ್ ಹೆಬ್ಬಾರ್ ನಿವಾಸಗಳಿದ್ದು, ಸದ್ಯ ಸಚಿವರ ನಿವಾಸಗಳಿಗೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.