ನವದೆಹಲಿ: ವಾಯು ಮಾಲಿನ್ಯ ಮಿತಿ ಮೀರಿದ ಹಿನ್ನೆಲೆಯಲ್ಲಿ ಎರಡು ದಿನ ಲಾಕ್‌ಡೌನ್ ಜಾರಿ ಮಾಡುವಂತೆ ಸುಪ್ರೀಂ ಕೋರ್ಟ್ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಹೇಳಿದೆ.
ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿದ್ದವು. ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ 17 ವರ್ಷದ ವಿದ್ಯಾರ್ಥಿ ಆದಿತ್ಯ ದುಬೆ ಅನ್ನೋರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಜೆಐ ಎನ್‌ವಿ ರಮಣ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ವಿಶೇಷ ಪೀಠ ಇದರ ವಿಚಾರಣೆ ನಡೆಸಿತು.
ಈ ವೇಳೆ ಸಿಜೆಐ ರಮಣ.. ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರವನ್ನ ತೀವ್ರ ತರಾಟೆ ತೆಗೆದುಕೊಂಡರು. ಅಲ್ಲದೇ ಹದಗೆಟ್ಟ ಗಾಳಿಯ ಗುಣಮಟ್ಟವನ್ನ ನಿಯಂತ್ರಣ ಮಾಡಲು ಎರಡು ದಿನಗಳ ಲಾಕ್‌ಡೌನ್ ವಿಧಿಸುವಂತೆ ಕೋರ್ಟ್ ಸೂಚನೆ ನೀಡಿತು.