ಎಲೆಕ್ಟ್ರಿಕ್ ಕಾರು ಮಾರಾಟ: ಅಗ್ರಸ್ಥಾನದಲ್ಲಿ ಮುಂದುವರೆದ ಟಾಟಾ ಮೋಟಾರ್ಸ್ – Top 5 Ev Car sales In September 2022, check all details and auto news in kannada


ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಮಾರಾಟವು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಇವಿ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಸೆಪ್ಟೆಂಬರ್ ಅವಧಿಯ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟವು ಕಳೆದ ಎರಡು ವರ್ಷಗಳಿಂದ ಸಾಕಷ್ಟು ಹೆಚ್ಚಳವಾಗುತ್ತಿದ್ದು, ವಿವಿಧ ಇವಿ ಕಾರು ಮಾದರಿಗಳೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಸೆಪ್ಟೆಂಬರ್ ಅವಧಿಯಲ್ಲಿನ ಇವಿ ಮಾರಾಟ ಪಟ್ಟಿಯಲ್ಲಿ ಟಾಟಾ ಪ್ರಮುಖ ಇವಿ ಕಾರುಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿದ್ದು, ಟಾಪ್ 5 ಇವಿ ಮಾದರಿಗಳ ಪಟ್ಟಿ ಪ್ರಕಟಿಸಲಾಗಿದೆ.

ಟಾಟಾ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ

ಎಲೆಕ್ಟ್ರಿಕ್ ಕಾರುಗಳ ಮಾರಾಟ ಪಟ್ಟಿಯಲ್ಲಿ ಟಾಟಾ ನಿರ್ಮಾಣದ ಟಿಗೋರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳು ಅಗ್ರಸ್ಥಾನದಲ್ಲಿದ್ದು, ಎರಡು ಮಾದರಿಗಳು ಸೆಪ್ಟೆಂಬರ್ ಅವಧಿಯಲ್ಲಿ ಒಟ್ಟು 2,831 ಯುನಿಟ್ ಮಾರಾಟಗೊಂಡಿವೆ. ಈ ಕಾರುಗಳ ಮಾರಾಟವು ಕಳೆದ ವರ್ಷದ ಸೆಪ್ಟೆಂಬರ್ ಅವಧಿಗಿಂತ ಶೇ. 271ರಷ್ಟು ಹೆಚ್ಚಳವಾಗಿದ್ದು, ನೆಕ್ಸಾನ್ ಇವಿಯಲ್ಲಿ ಮ್ಯಾಕ್ಸ್ ಎಡಿಷನ್ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿಯು ಸದ್ಯ ಮಾರುಕಟ್ಟೆಯಲ್ಲಿ ನೆಕ್ಸಾನ್ ಇವಿ, ನೆಕ್ಸಾನ್ ಇವಿ ಮ್ಯಾಕ್ಸ್, ಟಿಗೋರ್ ಇವಿ, ಟಿಯಾಗೋ ಇವಿ ಮತ್ತು ಎಕ್ಸ್ ಪ್ರೆಸ್ಸ್-ಟಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಟಿಯಾಗೋ ಇವಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಟಿಯಾಗೋ ಇವಿ ಕಾರಿನ ವಿತರಣೆಯು ಜನವರಿಯಿಂದ ಆರಂಭವಾಗಲಿದ್ದು, ಬಜೆಟ್ ಬೆಲೆಯೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ.

TV9 Kannada


Leave a Reply

Your email address will not be published.