ಹೈಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಆದರೆ ಮುಂದಿನ ನಮ್ಮ ನಿಲುವಿನ ಬಗ್ಗೆ ಚರ್ಚೆ ಮಾಡ್ತೀವಿ. ಪಕ್ಷದ ಹಿರಿಯ ನಾಯಕರ ಜೊತೆ ಚರ್ಚೆ ಮಾಡುತ್ತೇವೆ.

ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಎಸಿಬಿ ರಚನೆ ಮಾಡಿದ್ದು ಹಿಂದಿನ ಕಾಂಗ್ರೆಸ್ ಸರ್ಕಾರ. ಇದರಿಂದ ಬಿಜೆಪಿ ಸರ್ಕಾರಕ್ಕೆ ಹಿನ್ನಡೆ ಆಗಿಲ್ಲ ಎಂದು ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಅವರು ಹಿಂದೆ ಎಸಿಬಿ ಜಾರಿಗೆ ತಂದವರು. ಏನಾದ್ರೂ ಹಿನ್ನೆಡೆ ಆಗಿದ್ರೆ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಆಗ್ತಾರೆ ಅಂತಾ ನಾನು ಹೇಳಿಲ್ಲ ಎಂದು ನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಲ್ಲಿಯವರೆಗೆ ಬದಲಾವಣೆ ಮಾಡಿಲ್ಲ, ಇನ್ನೇನು ಮಾಡುತ್ತಾರೆ. ಅವರೆಲ್ಲಾ ಆರ್ಎಸ್ಎಸ್ ಕೈಗೊಂಬೆ ಅವರೇನು ಹೇಳುತ್ತಾರೆ ಎಂದು ಹೇಳಿಕೆ ನೀಡಿದರು.