ಜೀ ಕನ್ನಡದಲ್ಲಿ (Zee Kannada) ಪ್ರಸಾರವಾದ ‘ಡ್ರಾಮಾ ಜ್ಯೂನಿಯರ್ಸ್’ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ಮಹತಿ ವೈಷ್ಣವಿ ಭಟ್ (Mahati Vaishnavi Bhat). ಈ ರಿಯಾಲಿಟಿ ಶೋನಿಂದ ಅವರ ಖ್ಯಾತಿ ಹೆಚ್ಚಿತು. ಸದ್ಯ, ಧಾರಾವಾಹಿ ಕೆಲಸದಲ್ಲಿ ಅವರು ಬ್ಯುಸಿ ಇದ್ದಾರೆ. ಹಾಗಂತ ಅವರು ಶಿಕ್ಷಣದ ಕಡೆಗೆ ಗಮನ ಹರಿಸುವುದನ್ನು ನಿಲ್ಲಿಸಿಲ್ಲ. ಈ ನಟಿ ಈಗ ಎಸ್ಎಸ್ಎಲ್ಸಿ ಪಾಸ್ ಆಗಿದ್ದಾರೆ. ಅದೂ ಶೇ.99 ಅಂಕ ಗಳಿಸಿ ಅನ್ನೋದು ವಿಶೇಷ. ಈ ಬಗ್ಗೆ ಮಹತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ […]
ಜೀ ಕನ್ನಡದಲ್ಲಿ (Zee Kannada) ಪ್ರಸಾರವಾದ ‘ಡ್ರಾಮಾ ಜ್ಯೂನಿಯರ್ಸ್’ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ಮಹತಿ ವೈಷ್ಣವಿ ಭಟ್ (Mahati Vaishnavi Bhat). ಈ ರಿಯಾಲಿಟಿ ಶೋನಿಂದ ಅವರ ಖ್ಯಾತಿ ಹೆಚ್ಚಿತು. ಸದ್ಯ, ಧಾರಾವಾಹಿ ಕೆಲಸದಲ್ಲಿ ಅವರು ಬ್ಯುಸಿ ಇದ್ದಾರೆ. ಹಾಗಂತ ಅವರು ಶಿಕ್ಷಣದ ಕಡೆಗೆ ಗಮನ ಹರಿಸುವುದನ್ನು ನಿಲ್ಲಿಸಿಲ್ಲ. ಈ ನಟಿ ಈಗ ಎಸ್ಎಸ್ಎಲ್ಸಿ ಪಾಸ್ ಆಗಿದ್ದಾರೆ. ಅದೂ ಶೇ.99 ಅಂಕ ಗಳಿಸಿ ಅನ್ನೋದು ವಿಶೇಷ. ಈ ಬಗ್ಗೆ ಮಹತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಸಾಕಷ್ಟು ವೈರಲ್ ಆಗಿದೆ. ಅವರಿಗೆ ಎಲ್ಲ ಕಡೆಯಿಂದ ಶುಭಾಶಯ ಹರಿದು ಬರುತ್ತಿದೆ.
ಮೇ 19ರಂದು ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಹೊರ ಬಿದ್ದಿದೆ. ಸಾಕಷ್ಟು ಮಂದಿ 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಮಹತಿ ವಿಷ್ಣು ಭಟ್ ಕೂಡ ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಗಳಿಸಿದ್ದಾರೆ. ಅವರು 625ಕ್ಕೆ ಬರೋಬ್ಬರಿ 619 ಅಂಕ ಪಡೆದಿದ್ದಾರೆ. ಈ ಮೂಲಕ ಅವರ ಫಲಿತಾಂಶ ಶೆ. 99.04 ಆಗಿದೆ. ಇದು ಅವರಿಗೆ ಹಾಗೂ ಅವರ ಕುಟುಂಬಕ್ಕೆ ಖುಷಿ ನೀಡಿದೆ.