ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ ನೀಡಲು ಸಿದ್ಧ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಪ್ರಲ್ಹಾದ್ ಜೋಶಿ ಭರವಸೆ | Ready to provide legal assistance for increase in ST reservation Pralhad Joshi assures Valmiki Prasannananda Swamiji


ಶೇ 7.5 ಕ್ಕೆ ಎಸ್.ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಶೇ 3 ರಷ್ಟು ಇರುವ ಎಸ್.ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ ನೀಡಲು ಸಿದ್ಧ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಪ್ರಲ್ಹಾದ್ ಜೋಶಿ ಭರವಸೆ

ಪ್ರಲ್ಹಾದ್ ಜೋಶಿ

ಬೆಂಗಳೂರು: ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ( Pralhad Joshi) ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಪ್ರಲ್ಹಾದ್ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು.

ಶೇ 7.5 ಕ್ಕೆ ಎಸ್.ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಹೀಗಾಗಿ ಶೇ 3 ರಷ್ಟು ಇರುವ ಎಸ್.ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

ಸ್ವಾಮೀಜಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಜೋಶಿ, ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಗಳನ್ನ ಆಲಿಸಿದರು. ನಾಗಮೋಹನ್ ದಾಸ್ ವರದಿ ಜಾರಿ ಕುರಿತ ಸ್ವಾಮೀಜಿ ಅವರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸಚಿವರು ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಸ್ವಾಮೀಜಿಯವರಿಗೆ ತಿಳಿಸಿದರು.

ಎಸ್.ಟಿ ಮೀಸಲಾತಿ ಶೇ 3 ರಿಂದ ಶೇ 7.5 ರಷ್ಟು ಹೆಚ್ಚಿಸಲು ಕೆಲವು ಕಾನೂನಿನ ತೊಡಕಗಳು ಎದುರಾಗಲಿವೆ. ಕಾನೂನಿನ ಅಡ್ಡಿಗಳನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಪ್ರಲ್ಜಾದ್ ಜೋಶಿ ಹೇಳಿದರು. ಧರಣಿ ಕೈ ಬಿಡುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.