ಬೆಂಗಳೂರು: ಸಿಬಿಎಸ್‍ಸಿ ಹಾಗೂ ಐಸಿಎಸ್‍ಸಿಯ 12 ನೇ ತರಗತಿಯ ಪರೀಕ್ಷೆಗಳು ರದ್ದುಗೊಳಿಸಿದ ಬೆನ್ನಲೇ, ರಾಜ್ಯ ಸರ್ಕಾರ ಕರ್ನಾಟಕದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದೆ. ಈ ಹಿನ್ನೆಲೆಯಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರದಲ್ಲಿರೋ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಬಳಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿ, ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು. ಈಗಾಗಲೇ ಪಿಯುಸಿ ಪರೀಕ್ಷೆ ರದ್ದಾಗಿದೆ. ಇದರೊಂದಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೂಡ ರದ್ದಾಗಬೇಕು ಎಂದರು. ಇದನ್ನೂ ಓದಿ:ಯಡಿಯೂರಪ್ಪ ಸರ್ಕಾರ ಹುಚ್ಚಾಸ್ಪತ್ರೆ, ಹುಚ್ಚರ ಸಂತೆ: ವಾಟಾಳ್ ನಾಗರಾಜ್

ಪಿಯುಸಿ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಪರೀಕ್ಷೆ ಇಲ್ಲದೆ ಪಾಸ್ ಮಾಡಿದ್ದೀರಿ. ಹಾಗೆ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಬೇರೆ ಆರೋಗ್ಯ ಇದೆಯೇ? ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಸರ್ಕಾರ ಪಿಯುಸಿ ವಿದ್ಯಾರ್ಥಿಗಳಿಗೊಂದು ನೀತಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಒಂದು ನೀತಿ ಮಾಡಿದೆ. ಇದು ಬೇಡ ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಿ ಎಂದು ಶಿಕ್ಷಣ ಸಚಿವರಿಗೆ ವಾಟಾಳ್ ಆಗ್ರಹಿಸಿದರು.

The post ಎಸ್‍ಎಸ್‍ಎಲ್‍ಸಿ, ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕು – ವಾಟಾಳ್ appeared first on Public TV.

Source: publictv.in

Source link