ನರೇಂದ್ರ ಮೋದಿ
ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಏಪ್ರಿಲ್ 21 ರಂದು ಸಿಖ್ ಗುರು ತೇಗ್ ಬಹದ್ದೂರ್ (Sikh guru Tegh Bahadur) ಅವರ 400 ನೇ ಪ್ರಕಾಶ್ ಪುರಬ್ (ಜನ್ಮ ದಿನಾಚರಣೆ) ಸಂದರ್ಭದಲ್ಲಿ (400th Parkash Purab) ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಶುಭ ಸಂದರ್ಭದಲ್ಲಿ ನಾಲ್ಕು ನೂರು ‘ರಾಗೀಸ್’ (ಸಿಖ್ ಸಂಗೀತಗಾರರು) ‘ಶಾಬಾದ್ ಕೀರ್ತನ್’ ನಲ್ಲಿ ಪ್ರದರ್ಶನ ನೀಡುತ್ತಾರೆ ಎಂದು ಸಚಿವಾಲಯ ತಿಳಿಸಿದೆ. ದೆಹಲಿಯ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸಹಯೋಗದೊಂದಿಗೆ ಸಂಸ್ಕೃತಿ ಸಚಿವಾಲಯವು ಕಾರ್ಯಕ್ರಮವನ್ನು ಆಯೋಜಿಸಲಿದೆ. ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ವಿದೇಶಗಳ ಹಲವಾರು ಪ್ರಮುಖ ವ್ಯಕ್ತಿಗಳು ಆಚರಣೆಯ ಭಾಗವಾಗಲಿದ್ದಾರೆ ಎಂದು ಅದು ಹೇಳಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಿಖ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪುರಬ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.