ನವದೆಹಲಿ: ಪಶ್ಚಿಮ ಬಂಗಾಳದ ಜಲ್ಪಾಯ್ಗುರಿಯ ಬಳಿ ಗುವಾಹಟಿ-ಬಿಕಾನೆರ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದೆ. ಅಪಘಾತದಲ್ಲಿ 5 ಮಂದಿ ಸಾವನಪ್ಪಿದ್ದು, 40ಮಂದಿ ಗಾಯಗೊಂಡಿದ್ದಾರೆ ಅಂತಾ ರೈಲ್ವೆ ಇಲಾಖೆ ದೃಢಪಡಸಿದೆ.
ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿ ಪರಿಹಾರ ಘೋಷಣೆ ಮಾಡಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ 5 ಲಕ್ಷ ರೂಪಾಯಿ ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಣ್ಣಪುಟ್ಟ ಗಾಯಾಳುಗಳಿಗೆ 25,000 ರೂ ಪರಿಹಾರ ಘೋಷಿಸಿದ್ದಾರೆ.
ಬಗ್ಗೆ ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
Spoke to Railways Minister Shri @AshwiniVaishnaw and took stock of the situation in the wake of the train accident in West Bengal. My thoughts are with the bereaved families. May the injured recover quickly.
— Narendra Modi (@narendramodi) January 13, 2022