ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 14ನೇ ಆವೃತ್ತಿಯ 11ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳಿಂದ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. 

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಪೇರಿಸಿತ್ತು. 

ಇನ್ನು ಪಂಜಾಬ್ ನೀಡಿದ 196 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನು 10 ಎಸೆತ ಬಾಕಿ ಇರುವಂತೆ ಗೆಲುವಿನ ದಡ ಸೇರಿತು. 

ಪಂಜಾಬ್ ಪರ ಕೆಎಲ್ ರಾಹುಲ್ 61, ಮಾಯಾಂಕ್ ಅಗರವಾಲ್ 69, ದೀಪಕ್ ಹೂಡಾ 22 ಮತ್ತು ಶಾರುಖ್ ಖಾನ್ ಅಜೇಯ 15 ರನ್ ಬಾರಿಸಿದ್ದಾರೆ. 

ಡೆಲ್ಲಿ ಕ್ಯಾಪಿಟಲ್ಸ್ ಪರ ಪೃಥ್ವಿ ಶಾ 32, ಶಿಖರ್ ಧವನ್ 92, ರಿಷಬ್ ಪಂತ್ 15 ಮತ್ತು ಮಾರ್ಕಸ್ ಸ್ಟೋಯ್ನಿಸ್ ಅಜೇಯ 27 ರನ್ ಬಾರಿಸಿದ್ದಾರೆ.

Source: Kannadaprabha – ಸಿನಿಮಾ ಸುದ್ದಿ – https://www.kannadaprabha.com/cinema/news/
Read More