ಒಂದು ಶಾರ್ಟ್​ ಕಟ್.. ಮತ್ತೊಂದು ಲಾಂಗ್​ಲೈಫ್: ಕಾಸ್ಟಿಂಗ್ ಕೌಚ್​ ಬಗ್ಗೆ ರಾಗಿಣಿ ಹೇಳಿದ್ದಿದು..

ಒಂದು ಶಾರ್ಟ್​ ಕಟ್.. ಮತ್ತೊಂದು ಲಾಂಗ್​ಲೈಫ್: ಕಾಸ್ಟಿಂಗ್ ಕೌಚ್​ ಬಗ್ಗೆ ರಾಗಿಣಿ ಹೇಳಿದ್ದಿದು..

ವಿಜಯಪುರ: ಕನ್ನಡ ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ನಟಿ ರಾಗಿಣಿ ದ್ವಿವೇದಿ.. ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಒಂದು ಸಖತ್ ಸ್ಟುಪಿಡ್ ವರ್ಡ್ ಎಂದಿದ್ದಾರೆ.

ನೀವು ನಡೆಸುವ ಜೀವನದ ಜರ್ನಿ ಮೇಲೆ ಅದು ಡಿಪೆಂಡ್ ಆಗಿರುತ್ತೆ.. ಯಾವತ್ತೂ ಒಂದೇ ಕೈಯಲ್ಲಿ ಚಪ್ಪಾಳೆ ಆಗೋದಿಲ್ಲ. ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್​ಪೀರಿಯನ್ಸ್ ಆಗಿಲ್ಲ. ಲೈಫ್ ನಲ್ಲಿ ಎರಡು ಥರ ಜೀವನ ಇದೆ. ಒಂದು ಶಾರ್ಟ್ ಕಟ್ ಮತ್ತೊಂದು ಲಾಂಗ್ ಲೈಫ್. ಕಷ್ಟಪಟ್ಟರೆ ನಾವು ಬೆಳೀತಿವಿ, ಪ್ರತಿಯೊಂದು ಸ್ಟೆಪ್ ಬೈ ಸ್ಟೆಪ್ ಆಗುತ್ತೆ. ಶಾರ್ಟ್​ ಕಟ್ ತಗೊಂಡ್ರೆ ಕೆಲವೊಮ್ಮೆ ರಾಂಗ್ ಪರ್ಸನ್ ಮೀಟ್ ಮಾಡಬೇಕಾಗುತ್ತೆ. ಅತೀ ಶೀಘ್ರದಲ್ಲಿ ನೇಮು, ಫೇಮು, ದುಡ್ಡು ಗಳಿಸೋದನ್ನ ಬಿಟ್ಟು, ನಮ್ಮ ಕೆಲಸದ ಮೇಲೆ ನಾವು ಏನು ಮಾಡ್ತೀವಿ ಅನ್ನೋದರ ಮೇಲೆ ಫೋಕಸ್ ಮಾಡಬೇಕು ಎಂದರು.

ಹನ್ನೆರಡು ವರ್ಷದಿಂದ ಇಂಡಸ್ಟ್ರಿಯಲ್ಲಿದ್ದೇನೆ, ನಾನು ಕಾಸ್ಟಿಂಗ್ ಕೌಚ್ ಬಗ್ಗೆ ನೋಡಿಲ್ಲ. ಯಾರಾದ್ರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದ್ರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು. ಅವರಿಗೆ ಆ ಥರ ಅನುಭವ ಆಗಿರಬೇಕು, ಅದರ ಹಿಂದೆ ಸಾಕಷ್ಟು ಕಾರಣಗಳು ಇರುತ್ತವೆ ಎಂದು ಹೇಳಿದ್ರು.

The post ಒಂದು ಶಾರ್ಟ್​ ಕಟ್.. ಮತ್ತೊಂದು ಲಾಂಗ್​ಲೈಫ್: ಕಾಸ್ಟಿಂಗ್ ಕೌಚ್​ ಬಗ್ಗೆ ರಾಗಿಣಿ ಹೇಳಿದ್ದಿದು.. appeared first on News First Kannada.

Source: newsfirstlive.com

Source link